ಜನಸಾಮಾನ್ಯರಿಗೆ ಕೇಂದ್ರದಿಂದ ಸಿಹಿ ಸುದ್ದಿ: 7 ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಇಳಿಕೆ!




ನವದೆಹಲಿ: ದೇಶದ ಜನರಿಗೆ ತುಸು ಸಮಾಧಾನದ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ.


ಮೇ 22 ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದಾದ ನಂತರ ಇದೀಗ 40 ಪೈಸೆಯಷ್ಟು ಇಳಿಕೆ ಮಾಡಿದ್ದು ನವೆಂಬರ್ 1ರ ಬೆಳಗ್ಗೆ 6 ಗಂಟೆಯಿಂದ ಹೊಸ ಬೆಲೆ ಜಾರಿಗೆ ಬರಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಾಗಿದೆ. 


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂಪಾಯಿ ಇದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 106.31 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಇದೆ.


ಇದಲ್ಲದೇ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ.ಗಳಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 94.24 ರೂ. ಅದೇ ಸಮಯದಲ್ಲಿ, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 106.03 ರೂ ಮತ್ತು ಡೀಸೆಲ್ ಲೀಟರ್ಗೆ 92.76 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಈಗ ಎಲ್ಲ ಕಡೆ 40 ಪೈಸೆ ಇಳಿಕೆಯಾಗಲಿದ್ದು, ನವೆಂಬರ್ 1ರ ಬೆಳಗ್ಗೆ 6ರಿಂದ ಅನ್ವಯವಾಗಲಿದೆ.
ಇನ್ನು ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 101.92 ರೂಪಾಯಿ ಇದ್ದು ನಾಳೆಯಿಂದ 101.52 ರೂಪಾಯಿ ಆಗಲಿದೆ. ಇನ್ನು ಡಿಸೇಲ್ ಬೆಲೆ 87.89 ರೂಪಾಯಿ ಆಗಿದ್ದು ನಾಳೆ 87.47 ರೂಪಾಯಿ ಆಗಲಿದೆ.

Previous Post Next Post

Ads

Ads

نموذج الاتصال

×