labour card free house scheme : ಕಾರ್ಮಿಕ ಕಾರ್ಡ್ ಇದ್ದವರಿಗೆ ವಸತಿ ಯೋಜನೆ 2023, ಪಡೆಯುವುದು ಹೇಗೆ?


ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕ ಕಾರ್ಡ್ ಹೊಂದಿದವರಿಗೆ ವಸತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಕಾರ್ಮಿಕ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯ ಅಡಿಯಲ್ಲಿ ಮನೆಗಳನ್ನು ಪಡೆಯಲು ಯಾರ್ಯಾರು ಅರ್ಹರು?, ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?,  ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಶ್ರಮಿಕ್ ನಿವಾಸ ಯೋಜನೆ( Shramik Niwas scheme ) 2023:

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರುತ್ತಿದೆ. ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಕರ್ನಾಟಕವನ್ನು ಕಾರ್ಮಿಕ ಸ್ನೇಹಿಯಾಗಿಸಿರುವ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರುತ್ತಿದೆ.
ವಲಸೆ ಬಂದಂತ ಕಾರ್ಮಿಕರಿಗೆ ಇದೀಗ ಸೂರು ಒದಗಿಸುವ ‘ಶ್ರಮಿಕ್ ನಿವಾಸ್’ ಯೋಜನೆ ಶೀಘ್ರವೇ ಜಾರಿ ಆಗಲಿದೆ.

ಶ್ರಮಿಕ್ ನಿವಾಸ್ ಯೋಜನೆ ಎಂದರೇನು?:

ಕಾರ್ಮಿಕರು ಮತ್ತು ಅವರ ಕುಟುಂಬ, ರಸ್ತೆ ಬದಿ ಸಿಕ್ಕ ಸಿಕ್ಕಲ್ಲಿ ಬದುಕು ಸಾಗಿಸುವುದರಿಂದ ಮೂಲಭೂತ ಸೌಕರ್ಯದ ಕೊರತೆ ಜತೆಗೆ ಅನಾರೋಗ್ಯ ಸಮಸ್ಯೆ ಕೂಡಾ ಅವರನ್ನು ಕಾಡುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಮನಗಂಡ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಶ್ರಮಿಕ ವರ್ಗಕ್ಕೆ ವಸತಿ ಸೌಲಭ್ಯ ಒದಗಿಸುವ ಸಂಕಲ್ಪ ಮಾಡಿದೆ. ಈ ಸಂಕಲ್ಪದೊಂದಿಗೆ ರೂಪುಗೊಂಡಿರುವುದೇ ಶ್ರಮಿಕ್ ನಿವಾಸ್ ಯೋಜನೆ ಎಂದು ಇಲಾಖೆ ತಿಳಿಸಿದೆ.
ಕೈಗಾರಿಕಾ ಪ್ರದೇಶಗಳು ಸೇರಿ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ಶ್ರಮಿಕ್ ನಿವಾಸ್ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಹಾಗೂ ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ.

ಯಾರೆಲ್ಲಾ ಈ ಮನೆಗಳನ್ನು ಪಡೆಯಬಹುದು :

  1.  ಈ ಮನೆಗಳನ್ನು ಪಡೆಯಲು ಕಾರ್ಮಿಕ ಕಾರ್ಡ್ಗಳನ್ನು ಹೊಂದಿರಬೇಕು.
  2. ವಲಸಿಗ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯ ಕಡೆಯಿಂದ ವಸತಿ ದೊರೆಯಲಿದೆ.

ಈ ಯೋಜನೆಯ ಮೊದಲ ಹಂತವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ “ಶ್ರಮಿಕ್ ನಿವಾಸ್- ಬೃಹತ್ ವಸತಿ ಸಮುಚ್ಚಯ’ ಉದ್ಘಾಟನೆಗೆ ಸಜ್ಜಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ. ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ. ಏಕ ಹಾಸಿಗೆ ವ್ಯವಸ್ಥೆಯಡಿ 96 ಕಾರ್ಮಿಕರು ಮತ್ತು ದ್ವಿ ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರಿಗೆ ವಸತಿ ಅನುಕೂಲ ಲಭಿಸಲಿದೆ.

ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಈ ವಸತಿಗೃಹಗಳನ್ನು ನಿರ್ಮಿಸುವ ಯೋಜನೆಯಲ್ಲಿದೆ. ಅಷ್ಟೇ ಅಲ್ಲದೆ ಈ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯಕ್ಕೂ ವಸತಿ ಯೋಜನೆಯ ಮೂಲಕ ಕೂಡ ಯಾವುದೇ ರೀತಿಯ ಕೊರತೆ ಇರುವುದಿಲ್ಲ. ವಿದ್ಯುತ್ ಹಾಗೂ ನೀರಿನ ಸರಬರಾಜು ಕೂಡ ಇರುತ್ತದೆ. ಕಾರ್ಮಿಕರಿಗೆಂದೇ ಇಂತಹ ದೊಡ್ಡ ದೊಡ್ಡ ಸೌಲಭ್ಯಗಳನ್ನು ಕರ್ನಾಟಕ ಸರ್ಕಾರವು ಒದಗಿಸುತ್ತಿರುವುದು ಒಂದು ಸಂತೋಷದ ವಿಷಯವಾಗಿದೆ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಬಂಧುಗಳಿಗೆ ಹಾಗೂ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಶೇರ್ ಮಾಡಿ, ಧನ್ಯವಾದಗಳು.

Previous Post Next Post

Ads

Ads

نموذج الاتصال

×