ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

 

ಒಡಿಶಾ ರೈಲ್ವೆ ದುರಂತದಲ್ಲಿ 270ಕ್ಕೂ ಹೆಚ್ಚು ಜನರ ಸಾವು ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಮನವಿ ಸಲ್ಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಬರೆದ ಪತ್ರದಲ್ಲಿ, ಅಪಘಾತದಲ್ಲಿ ಜನರ ಸಾವಿಗೀಡಾಗಿದ್ದಾರೆ ಇದರ ಹೊಣೆಯನ್ನು ರೈಲ್ವೆ ಸಚಿವ ವೈಷ್ಣವ್ ಹೊರಬೇಕು ಆದರೆ ಅವರು ಅದನ್ನು ಒಪ್ಪಿಕೊಳ್ಳಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.


”ರೈಲ್ವೆ ಸಚಿವರು ಈಗಾಗಲೇ ಮೂಲ ಕಾರಣವನ್ನು ಕಂಡುಕೊಂಡಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ, ಆದರೆ ಇನ್ನೂ ಸಿಬಿಐ ತನಿಖೆಗೆ ವಿನಂತಿಸಿದ್ದಾರೆ. ಸಿಬಿಐ ಅಪರಾಧಗಳನ್ನು ತನಿಖೆ ಮಾಡಲು ಇದೆ, ರೈಲ್ವೆ ಅಪಘಾತಗಳನ್ನಲ್ಲ. ಸಿಬಿಐ ಅಥವಾ ಯಾವುದೇ ಇತರ ಕಾನೂನು ಜಾರಿ ಸಂಸ್ಥೆ ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಖರ್ಗೆ ವಾದಿಸಿದ್ದಾರೆ. ಇದಲ್ಲದೆ, ರೈಲ್ವೆ ಸುರಕ್ಷತೆ, ಸಿಗ್ನಲಿಂಗ್ ಮತ್ತು ನಿರ್ವಹಣೆಗಳಲ್ಲಿ ತಾಂತ್ರಿಕ ಪರಿಣತಿಯನ್ನು ಹೊಂದಿರುವುದಿಲ್ಲ” ಎಂದು ಅವರು ಹೇಳಿದರು.

ರೈಲ್ವೆಯ ಸುರಕ್ಷತೆಯನ್ನು ಸುಧಾರಿಸುವ ಮತ್ತು ರೈಲು ಅಪಘಾತದ ನಿಖರವಾದ ಕಾರಣವನ್ನು ಕಂಡುಹಿಡಿಯುವ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಒತ್ತಿ ಹೇಳಿದ್ದಾರೆ.

”ಈ ಗಂಭೀರ ಅಪಘಾತಕ್ಕೆ ಕಾರಣವಾದ ನಿಜವಾದ ಕಾರಣಗಳನ್ನು ಪತ್ತೆಹಚ್ಚಲು ಮತ್ತು ಬೆಳಕಿಗೆ ತರಲು ಸರ್ಕಾರವು ಜವಾಬ್ದಾರವಾಗಿದೆ” ಎಂದು ಅವರು ಹೇಳಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತವು ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಭಾರತದ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದುರಂತವಾಗಿದೆ ಎಂದು ಖರ್ಗೆ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

”ಈ ದುಃಖದ ಸಮಯದಲ್ಲಿ ದೇಶವು ಒಗ್ಗಟ್ಟಿನಿಂದ ನಿಂತಿದೆ. ಹಲವು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಪ್ರತಿಯೊಬ್ಬ ಭಾರತೀಯನ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ. ಈ ಜೀವಗಳ ನಷ್ಟವು ಭರಿಸಲಾಗದು ಮತ್ತು ಯಾವುದೇ ವಿತ್ತೀಯ ಪರಿಹಾರ ಅಥವಾ ಸಾಂತ್ವನದ ಮಾತುಗಳು ಈ ಗಂಭೀರ ದುರಂತವನ್ನು ತುಂಬಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಭಾನುವಾರ ರೈಲ್ವೇ ಸಚಿವ ವೈಷ್ಣವ್ ಅವರು, ಬಾಲಸೋರ್ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಅಪಘಾತದ “ಮೂಲ ಕಾರಣ” ಮತ್ತು ಅದಕ್ಕೆ ಕಾರಣವಾದ ‘ಅಪರಾಧಿಗಳು’ ಗುರುತಿಸಲಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಈ ಅಪಘಾತವು ಸಂಭವಿಸಿದೆ. ಇದು ಕೋಲ್ಕತ್ತಾದಿಂದ ಸುಮಾರು 250 ಕಿಮೀ ದಕ್ಷಿಣ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕೆ ಬಾಲಸೋರ್‌ನ ಬಹನಾಗ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆಗೆ ಸಂಭವಿಸಿದೆ.

Previous Post Next Post

Ads

Ads

نموذج الاتصال

×