ಹಲೋ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಈ ಲೇಖನಕ್ಕೆ ಸ್ವಾಗತ! ನೆಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೆದ್ದು 135 ಸ್ಥಾನವನ್ನು ಗೆದ್ದುಕೊಂಡಿದೆ ತಾನು ಗೆಲ್ಲುವ ಮೊದಲು ಪ್ರಣಾಳಿಕೆಯಲ್ಲಿ 5 ಗ್ಯಾರೆಂಟಿಗಳನ್ನು ಹೇಳಿದೆ ಅದೇ ರೀತಿಯಲ್ಲಿ ಹೇಳಿದ ಗ್ಯಾರೆಂಟಿಗಳನ್ನು ಒಂದೊಂದಾಗಿ ಈಡೇರಿಸುತ್ತಿದೆ ಇಂತಹ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೊಜನೆ ಜಾರಿಯಾಗಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವ ನಿಟ್ಟಿನಲ್ಲಿ ಹಲವಾಗು CSE ಸೆಂಟರ್ , ಗ್ರಾಮ್ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರ್ ಓನ್, ಸೇವಾ ಸಿಂಧು, ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಯಾರಿಗ ಎಷ್ಟು ಹಣ ನೀಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಎನ್ನುವ ವಿಚಾರದಲ್ಲಿ ಸರ್ಕಾರ ಕಡಕ್ ಆದೇಶವನ್ನು ಹೊರ ಹಾಕಿದೆ ಇದರ ಸಂಪೂರ್ಣ ಮಾಹಿತಿ ತಿಳಿಯಲು ನಮ್ಮ ಈ ಲೇಖನವನ್ನು ಸ್ವಲ್ಪನೂ ಮಿಸ್ ಮಾಡದೆ ಕೊನೆಯವರೆಗೂ ಓದಿ.
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುಲ್ಕ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದ್ದಾರೆ. ಅರ್ಜಿ ಸಲ್ಲಿಸವ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ಸರ್ಕಾರವೇ ಸೇವಾಕೇಂದ್ರಗಳಿಗೆ ಶುಲ್ಕ ನೀಡುತ್ತಿದೆ. ಒಂದು ವೇಳೆ ಹಣ ಪಡೆದರೇ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗೃಹ ಲಕ್ಷ್ಮಿ ಹೈಲೈಟ್ಸ್:
- ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾರೇ ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
- ಈಗಾಗಲೆ 3 ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ ಎಂದು ಸಚಿವೆ ಮಾಹಿತಿ ತಿಳಿಸಿದ್ದಾರೆ.
- ಸರಕಾರದಿಂದಲೇ ಪ್ರತಿ ಅರ್ಜಿಗೆ 12 ರೂ. ನೀಡಲಾಗುತ್ತಿದೆ. 10 ರೂ. ಅಪ್ ಲೋಡ್ ಮಾಡಲು, 2 ರೂ. ಪ್ರಿಂಟ್ ಔಟ್ ಕೊಡಲು ನೀಡಲಾಗುತ್ತಿದೆ ಎಂದು ಸಚಿವೆ ಸ್ಪಷ್ಟನೆ.
- ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ಸಂಪೂರ್ಣ ಉಚಿತ ನೋಂದಣಿ
ಗೃಹ ಲಕ್ಷ್ಮಿ ಯೋಜನೆಯನ್ನು ಮಹಿಳೆಯರು ಉಚಿತವಾಗಿ ನೊಂದಣಿ ಮಾಡಿಸಿಕೊಳ್ಳಬೇಕೆಂದು ಬಹಳಷ್ಟು ಕಷ್ಟಪಟ್ಟು ಜಾರಿ ಮಾಡಿದ್ದೇವೆ. ಇದರಲ್ಲೂ ದುಡ್ಡು ಪಡೆಯುತ್ತಿರುವುದು ಗಮನಕ್ಕೆ ಬಂದರೆ ಅಂತವರ ಲಾಗಿನ್ ಐಡಿ ಮತ್ತು ಪಾಸವರ್ಡ್ ವಾಪಸ್ ಪಡೆಯಲು ಸೂಚನೆ ಕೊಡಲಾಗಿದೆ. ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ತಹಸಿಲ್ದಾರ್, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರೇ ಆಗಲಿ ಹಣಪಡೆಯುವುದು ಗಮನಕ್ಕೆ ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು. ಎಂದು ಸಚಿಮೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.