"ಗೃಹ ಲಕ್ಷ್ಮೀ" ಸೇವಾ ಸಿಂಧು ಆನ್‌ಲೈನ್‌ ಅರ್ಜಿ ದಿನಾಂಕ | Gruha Lakshmi Scheme Apply Online Karnataka 2023

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ “ಗೃಹ ಲಕ್ಷ್ಮೀ” (Gruha Lakshmi Scheme) ಯೋಜನೆಯ Online ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಇತರೆ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. (sevasindhugs.karnataka.gov.in gruha lakshmi)

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ “ಗೃಹ ಲಕ್ಷ್ಮೀ” ಯೋಜನೆಯನ್ನು ಜಾರಿ ಮಾಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೇಸ್‌ ಪಕ್ಷವು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಈ ಯೋಜನೆಯನ್ನು ಅನುಷ್ಠಾಣಕ್ಕೆ ತರಲಾಗಿದೆ.

“ಗೃಹ ಲಕ್ಷ್ಮೀ” ಯೋಜನೆಯ ಆನ್‌ಲೈನ್‌ ಅರ್ಜಿ ಪ್ರಕ್ರಿಯೆಯು ಜುಲೈ 16 ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮನೆ ಯಜಮಾನಿ ಅಕೌಂಟ್‌ಗೆ 2000 ರೂ. ಜಮಾ ಮಾಡುವುದಾಗಿ ಸಿಎಂ ಮಾಹಿತಿ ನೀಡಿದ್ದರು.

“ಗೃಹ ಲಕ್ಷ್ಮೀ” (Gruha Lakshmi) ಯೋಜನೆಯ ಉದ್ದೇಶ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಬಹು ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ” ಯನ್ನು ಜಾರಿಗೆ ತರಲಾಗಿದೆ.

“ಗೃಹಲಕ್ಷ್ಮಿ ಯೋಜನೆ” (Gruha Lakshmi Scheme) ಷರತ್ತುಗಳು ಮತ್ತು ಮಾರ್ಗಸೂಚಿಗಳು

  • ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
  • ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆ ಅನ್ವಯಿಸಲಾಗುತ್ತದೆ.
  • ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 16 ರಿಂದ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ ನಲ್ಲಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
  • ಅರ್ಜಿದಾರರು ಆನ್‌ಲೈನ್‌ ಆಪ್‌, ಸೇವಾ ಸಿಂಧು ಪೋರ್ಟಲ್ ಮೂಲಕವಾಗಲೀ ಅಥವಾ ಭೌತಿಕವಾಗಿಯಾಗಲೀ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
  • ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.

“ಗೃಹಲಕ್ಷ್ಮಿ ಯೋಜನೆ” (Gruha Lakshmi Scheme) ಇವರಿಗೆ ಸಿಗುವುದಿಲ್ಲ

  • ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
    • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ.
    • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ .

“ಗೃಹ ಲಕ್ಷ್ಮಿ ” ಯೋಜನೆಯ ಸೇವಾ ಸಿಂಧು ಅರ್ಜಿ ಸಲ್ಲಿಸುವುದು ಹೇಗೆ?

  • ಗೃಹ ಲಕ್ಷ್ಮಿ ” ಯೋಜನೆ ಅಡಿಯಲ್ಲಿ ಉಚಿತ ಸೌಲಭ್ಯ ಪಡೆಯಲು ಇಚ್ಛೆಯಿರುವ ಗ್ರಾಹಕರು ಕೇಳಗೆ ನೀಡಿರುವ ಆಪ್‌ ಅಥವಾ ಸೇವಾ ಸಿಂಧು ಪೋರ್ಟಲ್ ಅಧಿಕೃತ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ಅಲ್ಲಿ “ಗೃಹ ಲಕ್ಷ್ಮಿ ” ಎಂದು ನಮೂದಿಸಲಾಗಿರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿ.
  • ಮುಂದಿನ ಲಿಂಕ್‌ನಲ್ಲಿ “ಗೃಹ ಲಕ್ಷ್ಮಿ ” Gruha Lakshmi Scheme ಆನ್‌ಲೈನ್‌ ಅರ್ಜಿ ಸಿಗುತ್ತದೆ.
  • ಆದಾದ ನಂತರ, ಮನೆ ಯಜಮಾನಿಯ ಹೆಸರು ಮತ್ತು ವಿಳಾಸ, ಮನೆ ಯಜಮಾನಿಯ ಆಧಾರ ಸಂಖ್ಯೆ, ಮನೆ ಯಜಮಾನಿಯ ಬ್ಯಾಂಕ್ ಖಾತೆ ವಿವರಗಳು, ನಿಮ್ಮ ಮೊಬೈಲ್‌ ನಂಬರ್‌ʼನ್ನು ಹಾಗೂ ಇತರೆ ಮಾಹಿತಿಯನ್ನು ಅಲ್ಲಿ ಭರ್ತಿ ಮಾಡಬೇಕು.
  • I Agree ಅಂತ ಇರುತ್ತದೆ ಅದರ ಮೇಲೆ ಕ್ಲಿಕ್‌ ಮಾಡಬೇಕು.
  • ಕಡೆಯದಾಗಿ Word verification ಅಂತ ಇರುವಲ್ಲಿ ಅಲ್ಲಿ ಕಾಣುವ ನಂಬರ್‌ʼನ್ನು ಕೇಳಗೆ ನೀಡಿರುವ ಬಾಕ್ಸʼನಲ್ಲಿ ತುಂಬಬೇಕು. ನಂತರ Submit ಮೇಲೆ ಕ್ಲಿಕ್‌ ಮಾಡಿ.

ʼಗೃಹ ಲಕ್ಷ್ಮೀʼ ಯೋಜನೆ ಮುಖ್ಯಾಂಶಗಳು – Gruha Lakshmi Scheme

  • APL/ BPL ರೇಷನ್‌ ಕಾರ್ಡ್ ಹೊಂದಿದವರಿಗೆ ಗೃಹ ಲಕ್ಷ್ಮೀ ಯೋಜನೆ
  • ಮನೆ ಯಜಮಾನಿ ಅರ್ಜಿ ಜತೆ ತಮ್ಮ ಬ್ಯಾಂಕ್ ಅಕೌಂಟ್, ಆಧಾರ್ ಕಾರ್ಡ್ ನೀಡಬೇಕು.
  • ಆಗಸ್ಟ್ ನಿಂದ ಮನೆ ಯಜಮಾನಿ ಅಕೌಂಟ್‌ಗೆ 2000 ರೂ. ಜಮಾ

Gruha Lakshmi Scheme ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ನಿರಂತರವಾಗಿ ಮುಂದುವರೆಯುತ್ತದೆ.

Karnataka Gruha Lakshmi Scheme 2023 Apply Online ಲಿಂಕ್‌ಗಳು:
“ಗೃಹ ಲಕ್ಷ್ಮೀʼ” ಯೋಜನೆ:‌ Check Out
Gruha Lakshmi Seva Sindhu Website ಲಿಂಕ್-2:‌ (ಶೀಘ್ರದಲ್ಲೇ ಅರ್ಜಿ ಆರಂಭವಾಗುತ್ತದೆ.)
ಸೇವಾ ಸಿಂಧು ಪೋರ್ಟಲ್ ಲಿಂಕ್: sevasindhu.karnataka.gov.in/ https://sevasindhugs1.karnataka.gov.in/, https://sevasindhugs.karnataka.gov.in/, sevasindhugs.karnataka.gov.in gruha lakshmi

Previous Post Next Post

Ads

Ads

نموذج الاتصال

×