ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಳೆದ ಎರಡು ಮೂರು ದಿನಗಳಿಂದ ಸರ್ವರ ಸಮಸ್ಯೆಯಿಂದಾಗಿ ನೀವು ಸ್ಟೇಟಸ್ ಚೆಕ್ ಮಾಡಲು ಆಗುತ್ತಿರಲಿಲ್ಲ ಆದರೆ ಈಗ ಸರ್ವ ಸಮಸ್ಯೆ ಸರಿಯಾಗಿದ್ದು ನೀವು ಬಹಳ ಸರಳವಾಗಿ ನಿಮ್ಮ ಖಾತೆಗೆ ಹಣ ಬಂದಿರುವ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ವಿಧಾನವನ್ನು ಕೆಳಗೆ ಕೊಡಲಾಗಿದೆ
ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು ಸರ್ಕಾರವು ಒಂದು ಅಧಿಕೃತ ಜಾಲತಾಣ(ವೆಬ್ಸೈಟ್)ವನ್ನು ಬಿಡುಗಡೆ ಮಾಡಿದೆ.
ಪ್ರತಿ ಕೆಜಿಗೆ ₹34/- ರೂ. ನೀಡಲು ನಿರ್ಧರಿಸಿದೆ
ಪ್ರತಿ ಕೆಜಿಗೆ ₹34/- ರೂ ಗಳಂತೆ 5kg ಗೆ ( ಒಬ್ಬರಿಗೆ ) ₹170/-
ಇಬ್ಬರಿಗೆ ₹340/-
ಮೂವರಿಗೆ ₹510/-
ನಾಲ್ವರಿಗೆ ₹680/-
ಐದು ಮಂದಿಗೆ ₹850/-
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು
ಹಣ ಬಂದ ತಕ್ಷಣ ಮೆಸೇಜ್ ಕೂಡ ಬರಲಿದೆ :
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರ ಕುಟುಂಬದ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್ ಕಾರ್ಡ್‌ಗಳ 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸ ಬೇಕಿದೆ. ಅದರಂತೆ ಎಂದಿನಂತೆ ತಲಾ ಐದು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಎಲ್ಲಾ ಹಂತಗಳಲ್ಲಿಯೂ ಪ್ರತಿ ಜಿಲ್ಲೆಗೆ ಅನ್ನ ಭಾಗ್ಯದ ಹಣವನ್ನು ಜಮಾ ಮಾಡಲಾಗುತ್ತದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು
271100110519
ReplyDelete271100110519
ReplyDeleteHelp me
ReplyDelete