ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 - Karnataka Forest Department (KFD) Recruitment 2023


ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 – Karnataka Forest Department (KFD) Recruitment 2023



Karnataka Forest Department Recruitment 2023 : ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಪೂರ್ತಿ ಓದಿ.

Karnataka Forest Department KFD Recruitment 2023 : Details of Vacancies

ಹುದ್ದೆ : ಅರಣ್ಯ ವೀಕ್ಷಕ (Forest Watcher)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃತ್ತಹುದ್ದೆಗಳ ಸಂಖ್ಯೆ
ಬೆಂಗಳೂರು33
ಬೆಳಗಾವಿ20
ಬಳ್ಳಾರಿ20
ಚಾಮರಾಜನಗರ32
ಚಿಕ್ಕಮಗಳೂರು25
ಧಾರವಾಡ7
ಹಾಸನ20
ಕೆನರಾ32
ಕೊಡಗು16
ಕಲಬುರ್ಗಿ23
ಮಂಗಳೂರು20
ಮೈಸೂರು32
ಶಿವಮೊಗ್ಗ30

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಅಥವಾ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಾನ : ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 32 ವರ್ಷ
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,600 ರಿಂದ ರೂ. 32,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. (ಲಿಖಿತ ಪರೀಕ್ಷೆ ಇರುವುದಿಲ್ಲ)

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 - Karnataka Forest Department (KFD) Recruitment 2023
Forest Watcher Physical Efficiency test

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 220
• ಪ.ಜಾತಿ, ಪ.ಪಂ, ಪ್ರವರ್ಗ-1ರ ಅಭ್ಯರ್ಥಿಗಳು – ರೂ. 120

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಮೂಲಕ ಇ-ಪಾವತಿ ಸೌಲಭ್ಯವಿರುವ ಭಾರತೀಯ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 27, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 26, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 31, 2023

KFD Forest Watcher Recruitment 2023 : Important Links

SHORT NOTIFICATIONCLICK HERE
NOTIFICATION (Shivamogga)CLICK HERE
NOTIFICATION (Belagavi, Dharwad)CLICK HERE
APPLY ONLINECLICK HERE ಸೆಪ್ಟೆಂಬರ್ 27 ರಿಂದ ಪ್ರಾರಂಭ

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Previous Post Next Post

Ads

Ads

نموذج الاتصال

×