ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಯಾರು ಅರ್ಜಿ ಸಲ್ಲಿಸಬಹುದು

 ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ (Application) ಆಹ್ವಾನಿಸಿದೆ



ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದು, ಭರ್ತಿ ಮಾಡಬೇಕು. ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‍ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಒದಗಿಸಬೇಕು

ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಅರ್ಜಿಯನ್ನು ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿ 08182-248940ನ್ನು ಸಂಪರ್ಕಿಸುವುದು.


Previous Post Next Post

Ads

Ads

نموذج الاتصال

×