ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2023 - Chitradurga DCC Bank Recruitment 2023 Apply Online At Chitradurgadccbank.com

 

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನೇಮಕಾತಿ 2023 – Chitradurga DCC Bank Recruitment 2023 Apply Online at chitradurgadccbank.com



Chitradurga DCC Bank Recruitment 2023 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ : ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತರು, ದ್ವಿತೀಯ ದರ್ಜೆ ಗುಮಾಸ್ತರು, ಕಂಪ್ಯೂಟರ್ ಇಂಜಿನಿಯರ್, ವಾಹನ ಚಾಲಕರು, ಅಟೆಂಡರ್ಸ್/ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 68 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ

ಸಹಾಯಕ ಪ್ರಧಾನ ವ್ಯವಸ್ಥಾಪಕರು 6 40900-78200

ಪ್ರಥಮ ದರ್ಜೆ ಗುಮಾಸ್ತರು 9 37900-70850

ದ್ವಿತೀಯ ದರ್ಜೆ ಗುಮಾಸ್ತರು 35 30350-58250

ಕಂಪ್ಯೂಟರ್ ಇಂಜಿನಿಯರ್ 2 30350-58250

ವಾಹನ ಚಾಲಕರು 2 27650-52650

ಅಟೆಂಡರ್ಸ್/ಸಹಾಯಕರು 14 23500-47650

ಶೈಕ್ಷಣಿಕ ಅರ್ಹತೆ :

ಸಹಾಯಕ ಪ್ರಧಾನ ವ್ಯವಸ್ಥಾಪಕರು – ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಪ್ರಥಮ ದರ್ಜೆ ಗುಮಾಸ್ತರು – ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ದ್ವಿತೀಯ ದರ್ಜೆ ಗುಮಾಸ್ತರು – ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕಂಪ್ಯೂಟರ್ ಇಂಜಿನಿಯರ್ – ಬಿ.ಇ (ಕಂಪ್ಯೂಟರ್ ಸೈನ್ಸ್)/ ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್)/ ಬಿಸಿಎ ಪದವಿ ಹೊಂದಿರಬೇಕು.

ವಾಹನ ಚಾಲಕರು – ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಲಘು ಮತ್ತು ಬೃಹತ್ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.

ಅಟೆಂಡರ್ಸ್/ಸಹಾಯಕರು – ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.

ವಯೋಮಾನ : ದಿನಾಂಕ 16/10/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ

• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ


ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500

• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ, ಪ್ರ1, ಅಂಗವಿಕಲ, ಮಾಜಿ ಸೈನಿಕ, ವಿಧವಾ ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 15, 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 16, 2023

ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 16, 2023

Chitradurga DCC Bank Recruitment 2023 : Important Links

NOTIFICATION 👉 CLICK HERE

APPLY ONLINE 👉 CLICK HERE

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Previous Post Next Post

Ads

Ads

نموذج الاتصال

×