ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ (Gruha Lakshmi Scheme) ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್‌ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.
1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್‌ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿತ್ತು. ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಮೈಸೂರಿನಲ್ಲಿ ಆಗಸ್ಟ್ 30 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಅಂದಿನಿಂದ ಹಣವನ್ನು ಹಂತ ಹಂತವಾಗಿ ಫಲಾನುಭವಿಗಳಿಗೆ ವರ್ಗಾಯಿಸಲಾಗುತ್ತಿದೆ. ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ಲಕ್ಷಾಂತರ ಮಹಿಳೆಯರ ಖಾತೆಗಳಿಗೆ ಇನ್ನೂ ಹಣ ತಲುಪಿಲ್ಲ. ಹೀಗಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಹೀಗಾಗಿ ಯಾವ ಕಾರಣಕ್ಕಾಗಿ ಹಣ ಬಿಡುಗಡೆಯಾಗಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ