IPL 2024: 7 ತಂಡಗಳ ನೂತನ ಜೆರ್ಸಿ ಅನಾವರಣ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ IPL 2024 ಕ್ಕೆ ಚಾಲನೆ ದೊರೆಯಲಿದೆ.



ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಕ್ಕಾಗಿ 7 ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಏಳು ತಂಡಗಳಲ್ಲಿ 5 ತಂಡಗಳು ಈ ಹಿಂದಿನ ಜೆರ್ಸಿ ಬಣ್ಣವನ್ನೇ ಮುಂದುವರೆಸಿದರೆ, ಸನ್ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮಾತ್ರ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಅದರಂತೆ ಏಳು ತಂಡಗಳ ನೂತನ ಜೆರ್ಸಿ ವಿನ್ಯಾಸ ಈ ಕೆಳಗಿನಂತಿದೆ.

1- ಪಂಜಾಬ್ ಕಿಂಗ್ಸ್: 


ಐಪಿಎಲ್ 2023 ರಲ್ಲಿ ಫುಲ್ ರೆಡ್ ಬಣ್ಣದಲ್ಲಿ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ಪಡೆ ಈ ಬಾರಿ ಜೆರ್ಸಿ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಕೆಂಪು ಬಣ್ಣದ ಜೊತೆ ಪಂಜಾಬ್ ಈ ಬಾರಿ ಅಲ್ಲಲ್ಲಿ ಹಳದಿ ಬಣ್ಣವನ್ನು ಕೂಡ ವಿನ್ಯಾಸದಲ್ಲಿ ಬಳಸಿದೆ. ಹಾಗೆಯೇ ಈ ಹಿಂದೆ ಜೆರ್ಸಿಯ ಮುಂಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ದೊಡ್ಡದಾದ ಸಿಂಹದ ಲೋಗೋವನ್ನು ಈ ಬಾರಿ ವಿನ್ಯಾಸಗೊಳಿಸಲಾಗಿಲ್ಲ. ಅಷ್ಟೇ ಅಲ್ಲದೆ ಈ ಬಾರಿ ಫುಲ್ ರೆಡ್ ಬದಲಿಗೆ ಕೆಂಪು ಟಿ ಶರ್ಟ್ ಜೊತೆ ನೀಲಿ ಪ್ಯಾಂಟ್ನೊಂದಿಗೆ ಪಂಜಾಬ್ ಕಿಂಗ್ಸ್ ಕಣಕ್ಕಿಳಿಯಲಿದೆ.

2- ಡೆಲ್ಲಿ ಕ್ಯಾಪಿಟಲ್ಸ್: 


ರಿಷಭ್ ಪಂತ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿ ಕೂಡ ಬ್ಲೂ-ರೆಡ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಜೆರ್ಸಿಯ ಮುಂಭಾಗದ ವಿನ್ಯಾಸದಲ್ಲಿ ಸಣ್ಣ ಪುಟ್ಟ ಚೇಂಜ್ ಮಾಡಿದ್ದು ಬಿಟ್ಟರೆ, ಜೆರ್ಸಿಯಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿಲ್ಲ.

3- ಮುಂಬೈ ಇಂಡಿಯನ್ಸ್: 


ಕಳೆದ ಸೀಸನ್ನಂತೆ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ರಾಯಲ್ ಬ್ಲೂ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಆದರೆ ಈ ಸಲ ಜೆರ್ಸಿ ವಿನ್ಯಾಸದಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಲಾಗಿದ್ದು, ಅದರಂತೆ ಜೆರ್ಸಿ ಮೇಲೆ M ಆಕಾರವನ್ನು ವಿನ್ಯಾಸಗೊಳಿಸಿರುವುದು ವಿಶೇಷ.

4- ರಾಜಸ್ಥಾನ್ ರಾಯಲ್ಸ್: 


ಪಿಂಕ್ ಸಿಟಿಯನ್ನು ಪ್ರತಿನಿಧಿಸುವ ರಾಜಸ್ಥಾನ್ ರಾಯಲ್ಸ್ ಈ ಸಲ ಕೂಡ ಪಿಂಕ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ತೊಳ್ಭಾಗದಲ್ಲಿ ನೀಲಿ ಬಣ್ಣ ನೀಡಲಾಗಿರುವ ಈ ಜೆರ್ಸಿಯ ಮುಂಭಾಗದ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಇದರ ಹೊರತಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನೂತನ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿಲ್ಲ ಎಂದೇ ಹೇಳಬಹುದು.

5- ಚೆನ್ನೈ ಸೂಪರ್ ಕಿಂಗ್ಸ್: 


ಯೆಲ್ಲೊ ಆರ್ಮಿ ಖ್ಯಾತಿಯ ಸಿಎಸ್ಕೆ ತಂಡವು ಕಳೆದ ಬಾರಿಯಂತೆ ಈ ಸಲ ಕೂಡ ಹಳದಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಐಪಿಎಲ್ 2023 ರ ಸಿಎಸ್ಕೆ ಜೆರ್ಸಿಗೆ ಹೋಲಿಸಿದರೆ, ಈ ಬಾರಿ ಕೂಡ ಜೆರ್ಸಿ ವಿನ್ಯಾಸದಲ್ಲಿ ಅಂತಹ ಮಹತ್ವದ ಬದಲಾವಣೆ ಕಂಡು ಬಂದಿಲ್ಲ.

6- ಗುಜರಾತ್ ಟೈಟಾನ್ಸ್: 


ಶುಭ್ಮನ್ ಗಿಲ್ ಮುನ್ನಡೆಸಲಿರುವ ಗುಜರಾತ್ ಟೈಟಾನ್ಸ್ ತಂಡ ಕೂಡ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. GT ತಂಡ ಈ ಬಾರಿ ಕೂಡ ಈ ಹಿಂದಿನ ಜೆರ್ಸಿ ವಿನ್ಯಾಸವನ್ನು ಮುಂದುವರೆಸಿದ್ದು, ನೂತನ ಜೆರ್ಸಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿಲ್ಲ.

7- ಸನ್ರೈಸರ್ಸ್ ಹೈದರಾಬಾದ್: 


ಎಸ್ಆರ್ಹೆಚ್ ತಂಡವು ಈ ಬಾರಿ ನೂತನ ವಿನ್ಯಾಸದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಸನ್ರೈಸರ್ಸ್ ಕೇಪ್ ಈಸ್ಟರ್ನ್ ತಂಡ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಎಸ್ಆರ್ಹೆಚ್ ಐಪಿಎಲ್ಗೂ ಪರಿಚಯಿಸುತ್ತಿರುವುದು ವಿಶೇಷ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಬೇಕಿದ್ದು, ಆರ್ಸಿಬಿ ತನ್ನ ಹೊಸ ಜೆರ್ಸಿಯನ್ನು ಮಾರ್ಚ್ 19 ರಂದು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

Previous Post Next Post

Ads

Ads

نموذج الاتصال

×