ಯಾವುದೇ ಬಡ್ಡಿ ಇಲ್ಲದೆ 2 ಲಕ್ಷದವರೆಗೆ ಹಣ : ಪಡೆಯುವುದು ಹೇಗೆ ನೋಡಿ ! ಮತ್ತೊಂದು ಮಹತ್ವದ ಯೋಜನೆ ಜಾರಿ !


ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ಬಡ್ಡಿ ಇಲ್ಲದೆ ಸುಮಾರು 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

pmvishwakarma scheme funding information


ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಥವಾ ಪಿಎಂ ವಿಶ್ವಕರ್ಮ ಯೋಜನೆ ಮೂಲಕ ಕೇಂದ್ರ ಸರ್ಕಾರವು ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವುದಲ್ಲದೆ ನೆರವನ್ನು ಕಲ್ಪಿಸುವ ಉದ್ದೇಶದಿಂದ 13,000 ಕೋಟಿ ರೂಪಾಯಿಗಳ ಮೊತ್ತದ ನೆರವನ್ನು ಈ ಯೋಜನೆಗೆ ನೀಡಲಿದೆ.

ಕರಕುಶಲಿ ಸಮುದಾಯವು ದೇಶದಲ್ಲಿ ಒಂದು ಬಹುದೊಡ್ಡ ಅಸಂಘಟಿತ ಸಮುದಾಯ ವಾಗಿದ್ದು ಕೇಂದ್ರ ಸರ್ಕಾರವು ಆ ಸಮುದಾಯದ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಬಹುದು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು 2023ರಲ್ಲಿ ಜಾರಿಗೊಳಿಸಿದ್ದು ಮೂರು ಲಕ್ಷದವರೆಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ವ್ಯವಹಾರ ಆರಂಭಿಸುವವರಿಗೆ ಸಹಾಯಧನವನ್ನು ಸರ್ಕಾರ ನೀಡುತ್ತದೆ. ಅದರಂತೆ ಇದೀಗ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು ಪಡೆದುಕೊಳ್ಳಬೇಕು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಯೋಜನೆಗೆ ಬೇಕಾಗುವ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.

ಕೇಂದ್ರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ :

ಭಾರತ ದೇಶವನ್ನು ಸಾಂಪ್ರದಾಯಿಗಳ ತವರೂರು ಎಂದು ಕರೆಯಲಾಗುತ್ತದೆ ಎಷ್ಟೋ ಬಡ ಕುಟುಂಬಗಳು ಈ ದೇಶದಲ್ಲಿ ಕರಕುಶಲ ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಅವಲಂಬಿಸಿವೆ ಎಂದು ಹೇಳಬಹುದು.

ಇದೀಗ ಈ ಕಲೆಗಳಿಗೆ ಸರ್ಕಾರವು ಉತ್ತೇಜನ ನೀಡುವ ಸಲುವಾಗಿ ಹಾಗೂ ಕರಕುಶಲ ಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸುವ ಉದ್ದೇಶದಿಂದ ಈ ಯೋಜನೆಗೆ 13 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಕೇಂದ್ರ ಸರ್ಕಾರದ ಈ ಒಂದು ಯೋಜನೆಯ ಉತ್ತಮ ಯೋಜನೆಯಾಗಿದ್ದು ನಗರ ಹಾಗೂ ಗ್ರಾಮೀಣ ಪ್ರದೇಶದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ತಾಂತ್ರಿಕ ಜ್ಞಾನ ಹಾಗೂ ಹೊಸ ಉಪಕರಣಗಳ ಖರೀದಿ ಮಾಡಲು ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯವನ್ನು ನೀಡುತ್ತದೆ.

ರಾಷ್ಟ್ರ ಹಾಗು ಅಂತರಾಷ್ಟ್ರೀಯ ಮಟ್ಟದಲ್ಲಿ ಕುಶಲಕರ್ಮಿಗಳು ತಯಾರಿಸುವ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಸೌಲಭ್ಯ ನೀಡುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಈ ಯೋಜನೆಯಿಂದ ಸಾಂಪ್ರದಾಯಿಕ ಕಲೆಗಳನ್ನು ಅವಲಂಬಿಸಿರುವ ಎಷ್ಟೋ ಬಡ ಕುಟುಂಬಗಳು ಹೆಚ್ಚಿನ ಪ್ರಯೋಜನವನ್ನು ಪಡೆಯಲಿವೆ ಎಂದು ಹೇಳಬಹುದು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನಗಳು :

  1. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನಗಳನ್ನು ನೋಡುವುದಾದರೆ. ಕರಕುಶಲಿಗಳಾದ ಅಕ್ಕಸಾಲಿಗ ಕ್ಷೌರಿಕ ಕಮ್ಮಾರ ಮತ್ತು ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ ಕೌಶಲ್ಯಗಳನ್ನು ಹೊಂದಿರುವ ಜನರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅನೇಕ ರೀತಿಯಲ್ಲಿ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.
  2. ಸಾಂಪ್ರದಾಯಿಕ ಕೌಶಲ್ಯಗಳನ್ನು ಅಂದರೆ ಕಲೆಗಳನ್ನು ಅವಲಂಬಿಸಿರುವವರಿಗೆ ಯಾವುದೇ ಆಧಾರವಿಲ್ಲದೆ ಈ ಯೋಜನೆಯಡಿಯಲ್ಲಿ ಮೂರು ಲಕ್ಷದವರೆಗೆ ಕೇಂದ್ರ ಸರ್ಕಾರ ಸಾಲವನ್ನು ಒದಗಿಸುತ್ತದೆ.
  3. ಎರಡು ಕಂತುಗಳಲ್ಲಿ ಈ ಸಾಲವನ್ನು ಜನರಿಗೆ ನೀಡಲಾಗುತ್ತದೆ.
  4. ಮೊದಲ ಹಂತದಲ್ಲಿ ಒಂದು ಲಕ್ಷ ರೂಪಾಯಿ
  5. ಎರಡನೇ ಹಂತದಲ್ಲಿ ಎರಡು ಲಕ್ಷ ರೂಪಾಯಿಗೆ ಸಾಲವನ್ನು ನೀಡಲಾಗುತ್ತದೆ
  6. ಕೇವಲ ಶೇಕಡ ಐದರಷ್ಟು ಬಡ್ಡಿ ದರದಲ್ಲಿ ಈ ಯೋಜನೆಗೆ ಸಾಲವನ್ನು ನೀಡಲಾಗುತ್ತದೆ.
  7. ಹೀಗೆ ಕರಕುಶಲಕರ್ಮಿಗಳು ಈ ಯೋಜನೆಯಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಆರ್ಥಿಕ ನೆರವನ್ನು ಬೆಳಕು ಕುಟುಂಬಗಳು ಪಡೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಯಾರೆಲ್ಲಾ ಅರ್ಹರು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ.


  1. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು 18ವೃತ್ತಿಗಳಲ್ಲಿ ಯಾವುದಾದರು ಒಂದರಲ್ಲಿ ಸ್ವಯಂ ಉದ್ಯೋಗಿ ಆಗಿರಬೇಕೆಂದು ತಿಳಿಸಿದೆ.
  2. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸಿನ ಮಿತಿ 18 ವರ್ಷ ಪೂರೈಸಿರಬೇಕು
  3. ಅಭ್ಯರ್ಥಿಯ ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿ ಇರಬಾರದು.
  4. ಈ ಯೋಜನೆಗೆ ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
  5. ಹಿಂದಿನ 5 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಮುದ್ರಾ ಮತ್ತು ಪಿಎಂ ಸ್ವ ನಿಧಿ ಸಾಲಗಳನ್ನು ಅಭ್ಯರ್ಥಿಗಳು ಪಡೆದಿರಬಾರದು.
  6. ಒಂದು ವೇಳೆ ಮುದ್ರ ಮತ್ತು ಪಿ ಎನ್ ಸ್ವ ನಿಧಿ ಯೋಜನೆಗಳಲ್ಲಿ ಸಾಲವನ್ನು ಪಡೆದು ಸಾಲವನ್ನು ಮರುಪಾವತಿ ಮಾಡಿದ್ದರೆ ಮಾತ್ರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  7. ಹೀಗೆ ಈ ಎಲ್ಲ ಅರ್ಹತೆಗಳನ್ನು ಹೊಂದುವುದರ ಮೂಲಕ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ದಾಖಲೆಗಳು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳಿಂದರೆ,

  • ಪಾನ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ಆಧಾರ್ ಕಾರ್ಡ್
  • ಅಭ್ಯರ್ಥಿಯ ನಿವಾಸದ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಕೆಲಸಕ್ಕೆ ಸಂಬಂಧಿಸಿದ ದಾಖಲೆಗಳು
  • ಅಭ್ಯರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಪಾಸ್ ಬುಕ್

ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದುವುದರ ಮೂಲಕ ಅಭ್ಯರ್ಥಿಗಳು ಎಲ್ಲ ದಾಖಲೆಗಳನ್ನು ಸರಿಪಡಿಸಿಕೊಂಡ ನಂತರವೇ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಮುಖ್ಯವಾಗಿರುತ್ತದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ತಮ್ಮ ಹೆಸರನ್ನು ಸುಲಭವಾಗಿ ನೋಂದಣಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಲಾಗಿದೆ.

ತಮ್ಮ ಹತ್ತಿರ ಇರುವ ಗ್ರಾಮೀಣ ಸಾಮಾನ್ಯ ಸೇವಾ ಕೇಂದ್ರಗಳನ್ನು ಯೋಜನೆಯ ನೋಂದಣಿ ಕೇಂದ್ರಗಳಾಗಿ ಗುರುತಿಸಲಾಗಿದ್ದು ಮೊಬೈಲ್ನಲ್ಲಿ ಆನ್ಲೈನ್ ಮೂಲಕವೂ ಕೂಡ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಅರ್ಜಿ ಸಲ್ಲಿಸಲು ನೆರವನ್ನು ಕಲ್ಪಿಸಲಾಗಿದೆ ಎಂದು ಹೇಳಬಹುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು https://www.pmvishwakarma.gov.in/ಈ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ಕೇಂದ್ರ ಸರ್ಕಾರವು ಕರಕುಶಲಕರ್ಣಿಗಳಿಗೆ ತಮ್ಮ ವೃತ್ತಿಜೀವನವು ಸರಿಯಾದ ರೀತಿಯಲ್ಲಿ ಸಾಗಬೇಕೆನ್ನುವ ಉದ್ದೇಶದಿಂದ ಅವರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಮೂರು ಲಕ್ಷದವರೆಗೆ ಸಹಾಯಧನವನ್ನು ನೀಡುತ್ತಿದ್ದು .

ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನವನ್ನು ಅಸಂಘಟಿತ ವಲಯದ ಅದರಲ್ಲಿಯೂ ದೇಶದ ಸಾಂಪ್ರದಾಯಿಕ ಕಲೆಗಳ ಸಮುದಾಯದವರು ಅರ್ಜಿ ಸಲ್ಲಿಸಿ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದಾಗಿದೆ. ಹಾಗಾಗಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಬಗ್ಗೆ ನಿಮಗೆ ತಿಳಿದಿರುವ ಸಾಂಪ್ರದಾಯಿ ಕರಕುಶಲಕರ್ಮಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

Previous Post Next Post

Ads

Ads

نموذج الاتصال

×