ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ನಿಮಗೆ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾಗಿದ್ದವು . ಹೀಗಾಗಿ ರಾಜ್ಯ ಸರ್ಕಾರ 243 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳು ಎಂದು ಘೋಷಣೆ ಮಾಡಿತ್ತು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ನಿಮಗೆ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾಗಿದ್ದವು . ಹೀಗಾಗಿ ರಾಜ್ಯ ಸರ್ಕಾರ 243 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳು ಎಂದು ಘೋಷಣೆ ಮಾಡಿತ್ತು.
ಅದರಂತೆ ಬರಪೀಡಿತ ತಾಲೂಕುಗಳಿಗೆ ಬರ ಪರಿಹಾರ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿತ್ತು. ಅದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದ ಕಾರಣ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಕೇಂದ್ರ ಸರ್ಕಾರದಿಂದ 3,454 ಕೋಟಿ ಅನುದಾನ ಪಡೆದಿತ್ತು.
ಕೇಂದ್ರ ಸರ್ಕಾರದಿಂದ ಬಂದ ಈ ಅನುದಾನದ ಜೊತೆಗೆ ರಾಜ್ಯ ಸರ್ಕಾರವು ₹ 500 ಕೋಟಿ ಸೇರಿಸಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಬರ ಪರಿಹಾರದ ಜೊತೆಗೆ ಹೆಚ್ಚುವರಿ ₹3,000 ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಿದೆ.
ಇದೀಗ ರಾಜ್ಯ ಸರ್ಕಾರ ಬರ ಪರಿಹಾರ ಹಣ ಜಮಾ ಆಗಿರುವ ಎಲ್ಲಾ ರೈತರ ಪಟ್ಟಿ ಬಿಡುಗಡೆ ಮಾಡಿದ್ದು, ನೀವು ನಿಮ್ಮ ಮೊಬೈಲ್ ನಲ್ಲಿ ನಿಮಗೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು. ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಬರ ಪರಿಹಾರ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service89/PaymentDetailsReport.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ, ಬೆಳೆ ವಿಧ, ಋತುವನ್ನು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮದಲ್ಲಿ ಬರ ಪರಿಹಾರ ಹಣ ಜಮಾ ಆಗಿರುವ ಎಲ್ಲಾ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನೀವು ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಬರ ಪರಿಹಾರ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡಬಹುದು. ಒಂದು ವೇಳೆ ನಿಮ್ಮ ಹೆಸರಿಗೆ ಹಣ ಜಮಾ ಆಗದೇ ಇದ್ದರೆ ನಿಮ್ಮ ಹೆಸರಿಗೆ FID ನಂಬರ್ ಇದೆಯಾ ಎಂದು ಚೆಕ್ ಮಾಡಿ. ಚೆಕ್ ಮಾಡಲು ಕೆಳಗಿನ ಅಂಕಣವನ್ನು ತಪ್ಪದೇ ಓದಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.