ಸೆಪ್ಟೆಂಬರ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
- Indian Army Recruitment 2024: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್ನ್ಯೂಸ್ (Good News) ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಪೋರ್ಟ್ಸ್ಪರ್ಸನ್ (ಹವಿಲ್ದಾರ್ & ನಾಯ್ಬ್ ಸುಬೇದಾರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
- ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 17.5 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
- ಫಿಜಿಕಲ್ ಫಿಟ್ನೆಸ್ ಟೆಸ್ಟ್
- ಫಿಜಿಕಲ್ ಸ್ಟಾಂಡರ್ಡ್ಸ್ ಟೆಸ್ಟ್ & ಸ್ಕಿಲ್ ಟೆಸ್ಟ್
- ಮೆಡಿಕಲ್ ಟೆಸ್ಟ್
ವೇತನ:
ನಿಗದಿಪಡಿಸಿಲ್ಲ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆಫ್ಲೈನ್ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಅರ್ಜಿ ಕಳುಹಿಸುವ ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
- ‘ಡೈರೆಕ್ಟರೇಟ್ ಆಫ್ ಪಿಟಿ ಮತ್ತು ಸ್ಪೋರ್ಟ್ಸ್
- ಜನರಲ್ ಸ್ಟಾಫ್ ಬ್ರಾಂಚ್
- IHQ ಆಫ್ MoD (ಆರ್ಮಿ)
- ಕೊಠಡಿ ಸಂಖ್ಯೆ 747 ‘A’ ವಿಂಗ್
- ಸೇನಾ ಭವನ
- PO ನವದೆಹಲಿ-110011
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/06/2024
- ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30, 2024
Tags
Recruitment