ಕಂದಾಯ ಇಲಾಖೆಯಿಂದ ಈ ವರ್ಷದಿಂದ ರೈತರು ಯಾವುದೇ ಸರಕಾರಿ ಸೌಲಭ್ಯವನ್ನು ಪಡೆಯಲು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳಿಗೆ ಆಧಾರ್ ಲಿಂಕ್(adhar to rtc link) ಮಾಡುವುದನ್ನು ಕಡ್ಡಾಯ ಮಾಡಲಾಗಿದ್ದು, ಈಗ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ಪ್ರಕಟಿಸಿದೆ.
- ಕಂದಾಯ ಇಲಾಖೆಯಿಂದ ಈ ವರ್ಷದಿಂದ ರೈತರು ಯಾವುದೇ ಸರಕಾರಿ ಸೌಲಭ್ಯವನ್ನು ಪಡೆಯಲು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳಿಗೆ ಆಧಾರ್ ಲಿಂಕ್(adhar to rtc link) ಮಾಡುವುದನ್ನು ಕಡ್ಡಾಯ ಮಾಡಲಾಗಿದ್ದು, ಈಗ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ಪ್ರಕಟಿಸಿದೆ.
- ರೈತರು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ತಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳದಿದ್ದಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
- ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡಲು ಕೊನೆಯ ದಿನಾಂಕ ಯಾವುದು? ಲಿಂಕ್ ಎಲ್ಲಿ ಮಾಡಿಸಿಕೊಳ್ಳಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Why rtc to adhar link-ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಿಸಬೇಕು?
- ಸಹಾಯಧನದಲ್ಲಿ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪಡೆಯಲು ಅತ್ಯಗತ್ಯ.
- ಪ್ರಕೃತಿ ವಿಕೋಪ ಸಮಯದಲ್ಲಿ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವನ್ನು ಪಡೆಯಲು ಅಗತ್ಯವಾಗಿದೆ.
- ಬೆಳೆ ವಿಮೆ ಪರಿಹಾರ, ಬೆಳೆ ಹಾನಿ ಪರಿಹಾರ ಸಹಾಯಧನವನ್ನು DBT ಮೂಲಕ ಪಡೆಯಲು ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
- ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಅರಣ್ಯ ಇಲಾಖೆಯ ಸಹಾಯಧನ ಯೋಜನೆಯ ಸೌಲಭ್ಯ ಪಡೆಯಲು ಲಿಂಕ್ ಮಾಡುವುದು ಕಡ್ಡಾಯ.
ಪಹಣಿಗೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ ಯಾವುದು?
ಕಂದಾಯ ಇಲಾಖೆಯ ಪ್ರಸ್ತುತ ಪ್ರಕಟಣೆಯ ಪ್ರಕಾರ ರೈತರು ತಮ್ಮ ಜಮೀನಿನ ಪಹಣಿ/RTC ಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳಲು 31 ಜುಲೈ 2024 ಕೊನೆಯ ದಿನಾಂಕವಾಗಿದೆ.
RTC Aadhar link-/RTC i espo ಕಾರ್ಡ ಲಿಂಕ್ ಎಲ್ಲಿ ಮಾಡಿಸಬೇಕು?
ಅಗತ್ಯ ದಾಖಲೆಗಳ ಸಮೇತ ನಿಮ್ಮ ಗ್ರಾಮ/ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ/VA ಅವರನ್ನು ನೇರವಾಗಿ ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು ಅಥವಾ ನಿಮ್ಮ ಹೋಬಳಿಯ ನಾಡಕಚೇರಿಯನ್ನು ಭೇಟಿ ಮಾಡಿ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡಿಸಬಹುದು.
Required documents for rtc-adhar link- ಆಧಾರ್ ಕಾರ್ಡ ಲಿಂಕ್ ಮಾಡಲು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ?
1) ಅರ್ಜಿದಾರರ ಆಧಾರ್ ಕಾರ್ಡ
2) ಪಹಣಿ/RTC
3) ಅರ್ಜಿದಾರರ ಮೊಬೈಲ್ ನಂಬರ್
How to link rtc to adhar card-online ನಲ್ಲೇ ಪಹಣಿ-ಆಧಾರ್ ಲಿಂಕ್ ಮಾಡಬಹುದೇ?
ಕಂದಾಯ ಇಲಾಖೆಯ ಅಧಿಕೃತ ವೆಬ್ಬೆಟ್ ಅನ್ನು ಭೇಟಿ ಮಾಡಿ ರೈತರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲೇ ಆನೈನ್ ಮೂಲಕ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಿಕೊಳ್ಳಬಹುದು.
Step-1: ಪ್ರಥಮದಲ್ಲಿ ಈ RTC adhar card link status ಲಿಂಕ್ ಮೇಲೆ ಕ್ಲಿಕ್ ಮಾಡಿ ಕಂದಾಯ ಇಲಾಖೆಯ ಭೂಮಿ ವೆಬ್ಬೆಟ್ ಅನ್ನು ಪ್ರವೇಶ ಮಾಡಿ. ಇದಾದ ನಂತರ ಜಮೀನು ಯಾರ ಹೆಸರಿಗೆ ಇರುತ್ತದೆಯೋ ಅವರ ಮೊಬೈಲ್ ನಂಬರ್ ಅನ್ನು ಹಾಕಿ ಅಲ್ಲೇ ಕೆಳಗೆ ಕಾಣುವ ಕ್ಯಾಪ್ಟ್ ಕೋಡ್ ಅನ್ನು ಹಾಕಿ "SEND OTP" ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ತದನಂತರ ನೀವು ಹಾಕಿರುವ ಮೊಬೈಲ್ ನಂಬರ್ ಗೆ ಬಂದಿರುವ 6 ಅಂಕಿಯ ಒಟಿಪಿ ಅನ್ನು ನಮೂದಿಸಿ "LOGIN" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
Step-2: ಮೇಲಿನ ವಿಧಾನವನ್ನು ಅನುಸರಿಸಿ ಲಾಗಿನ್ ಅದ ಬಳಿಕ ಅರ್ಜಿದಾರರ ಆಧಾರ್ ಕಾರ್ಡ ಸಂಖ್ಯೆಯನ್ನು ಮತ್ತು ಆಧಾರ್ ಕಾರ್ಡನಲ್ಲಿರುವಂತೆ ಹೆಸರನ್ನು ಭರ್ತಿ ಮಾಡಿ "Verify" ಎಂದು ಕಾಣುಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ "ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ” ಎಂದು ಗೋಚರಿಸುತ್ತದೆ ಇದಕ್ಕೆ "OK" ಎಂದು ಕ್ಲಿಕ್ ಮಾಡಿಬೇಕು.
Step-3: ಈ ಮೇಲಿನ ಹಂತವನ್ನು ಮುಗಿಸಿದ ಬಳಿಕ ಅಲ್ಲೇ ಕೆಳಗೆ ಗೋಚರಿಸುವ "ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ” ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ ಮತ್ತೊಮ್ಮೆ ಅರ್ಜಿದಾರರ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ OTP ಬಟನ್ ಮೇಲೆ ಟಿಕ್ ಮಾಡಿ ಒಟಿಪಿ ಪಡೆಯಿರಿ/Generate OTP ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ ನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ "ಸಲ್ಲಿಸು/Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-4: ಈ ಪೇಜ್ ನ ಮುಖಪುಟದ ಎಡಬದಿಯಲ್ಲಿ ಕಾಣುವ "ಲಿಂಕ್ ಆಧಾರ್/Link Aadhar" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಕೆಳಗಡೆ ಕಾಣುವ ನಿಮ್ಮ ಸರ್ವೆ ನಂಬರ್ ಒಂದೊಂದನ್ನು ಟಿಕ್ ಮಾಡಿಕೊಂಡು ಅದರ ಮುಂದೆ ಕಾಣುವ "Link" ಬಟನ್ ಮೇಲೆ ಕ್ಲಿಕ್ ಮಾಡಬೇಕು ನಂತರ ಮತ್ತೆ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ನಮೂದಿಸಿ "Verify OTP" ಬಟನ್ ಮೇಲೆ ಕ್ಲಿಕ್ ಮಾಡಬೇಕು ಅಗ "ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು wood?/ Do you want to link your Aadhaar with the RTC?" ತೋರಿಸುತ್ತದೆ ಅದಕ್ಕೆ ಹೌದು/Yes ಎಂದು ಕ್ಲಿಕ್ ಮಾಡಿದರೆ ಈ ಸರ್ವೆ ನಂಬರ್ ಈಗಾಗಲೇ ಲಿಂಕ್ en/Survey No. already linked" w ಸಂದೇಶ ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಅಗಿದೆ ಎಂದು ನೀವು ತಿಳಿದುಕೊಳ್ಳಬೇಕು.