Pm kisan list check ಪಿಎಂ ಕಿಸಾನ್ ಹಣ ಯಾರಿಗೆ ಜಮೆಯಾಗಲಿದೆ? ಹೆಸರು ಇಲ್ಲೇ ಚೆಕ್ ಮಾಡಿ 2024

Pm kisan list check ಪಿಎಂ ಕಿಸಾನ್ ಯೋಜನೆಯ18 ನೇ ಕಂತಿನ ಹಣ ಯಾವ ತಿಂಗಳಲ್ಲಿ ಬಿಡುಗಡೆಯಾಗುತ್ತದೆ ಹಾಗೂ ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.



ಹಾಗಾದರೆ ಯಾವಾಗ ಹಣ ಜಮೆಯಾಗುತ್ತದೆ. ಯಾರು ಯಾರಿಗೆ ಜಮೆಯಾಗುತ್ತದೆ. ಹೊಸ ಪಟ್ಟಿ ಬಿಡುಗಡೆಯಾಗಿರುವ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಮೊಬೈಲ್ ನಲ್ಲೇ ಚೆಕ್ ಮಾಡಿ.

ಜೂನ್ ತಿಂಗಳಲ್ಲಿ ಕೆಲವು ರೈತರಿಗೆ ಪಿಎಂ ಕಿಸಾನ್ ಹಣ ಜಮೆ ಮಾಡಲಾಗಿತ್ತು.ಇನ್ನೂ ಕೆಲವು ರೈತರಿಗೆ ಜಮೆ ಮಾಡಲಾಗಿರಲಿಲ್ಲ. ಆದರೆ ಅವರ ಹೆಸರು ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

Pm kisan list check ಪಿಎಂ ಕಿಸಾನ್ ನಿಮಗೆ ಜಮೆಯಾಗುತ್ತೋ ಇಲ್ಲವೋ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಜಮೆಯಾಗುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ನಿಮ್ಮ ಜಿಲ್ಲೆ ಆಯ್ಕೆ ಮಾಡಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ಎ ಅಕ್ಷರದಿಂದ ಹೆಸರುಗಳ ಪಟ್ಟಿ ಕಾಣಿಸುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನುನೋಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಬಹುದು. ಅಲ್ಲಿ ಕೆಳಗಡೆ ಕಾಣಿಸುವ 1,2, 3, 4, 5, 6, ಹೀಗೆ ಅಕ್ಷರದ ಆಧಾರದ ಮೇಲೆ ನೀವು ನಂಬರ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಚೆಕ್ ಮಾಡಬಹುದು.

Pm kisan list check ಪಿಎಂ ಕಿಸಾನ್ ಹಣ ಜಮೆಯಾಗಲು ರೈತರ ಇಕೆವೈಸಿ ಮಾಡಿಸುವುದು ಕಡ್ಡಾಯ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಲು ರೈತರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.ಯಾವ ಯಾವ ರೈತರು ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರು ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬಹುದು.

ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.

Pm kisan list check ಏನಿದು ಪಿಎಂ ಕಿಸಾನ್ ಯೋಜನೆ?

ಪಿಎಂ ಕಿಸಾನ್ ಯೋಜನೆಯನ್ನು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದಕ್ಕಾಗಿ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನುಮೂರು ಕಂತುಗಳಲ್ಲಿ ಹಣ ಬಿಡುಗಡೆ ಜಮೆ ಮಾಡಲಾಗಿದೆ. ರೈತರಿಗೆ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿಯಂತೆ ಒಟ್ಟು ಒಂದು ವರ್ಷದಲ್ಲಿ 6 ಸಾವಿರ ರೂಪಾಯಿ ಜಮೆ ಮಾಡಲಾಗುವುದು.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಈಗಾಗಲೇ ದೇಶಾದ್ಯಂತ 9 ಕೋಟಿಗೂ ಹೆಚ್ಚು ರೈತರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಈ ಯೋಜನೆಯು ಅತೀ ಮಹತ್ವದ್ದಾಗಿದೆ

ಪಿಎಂ ಕಿಸಾನ್ ಇಕೆವೈಸಿ ಮಾಡಿಸಿದ್ದರೆ ನೀವು ನಿಮ್ಮ ಎಲ್ಲಾ ದಾಖಲೆಗಳಲ್ಲಿ ನಿಮ್ಮ ಹೆಸರು ಒಂದೇ ರೀತಿಯಾಗಿರುವುದನ್ನು ಚೆಕ್ ಮಾಡಿಕೊಳ್ಳಬೇಕು. ಇದರೊಂದಿಗೆ ರೈತರು ಆಧಾರ್ ಸೀಡಿಂಗ್ ಮಾಡಿಸುವುದು ಅತೀ ಮಹತ್ವದ್ದಾಗಿದೆ. ಬ್ಯಾಂಕಿಗೆ ತೆರಳಿ ನಿಮ್ಮ ಆಧಾರ್ ಕಾರ್ಡ್ ಸಲ್ಲಿಸಿ ಆಧಾರ್ ಸೀಡಿಂಗ್ ಮಾಡಿಸಿಕೊಳ್ಳಬೇಕು.

Previous Post Next Post

Ads

نموذج الاتصال

×